ಬೆಂಗಳೂರು: ಸರ್ಕಾರದ ವಿರುದ್ಧ ಹರಿಹಾಯ್ದಿದ್ದ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೂ ಯತ್ನಿಸಿದ್ದ ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಂಕಷ್ಟ ಎದುರಾಗಿದೆ. ಯೊಗೇಶ್ವರ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಸ್ವಪಕ್ಷ ಶಾಸಕರೇ ಸಿಎಂ ಯಡ್ಡಿಯೂರಪ್ಪಗೆ ಮನವಿ ಮಾಡಿದ್ದಾರೆ.
ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ 18 ಶಾಸಕರು ಸಹಿ ಸಂಗ್ರಹಿಸಿ, ಸಿಎಂ ಯಡಿಯೂರಪ್ಪ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಸಿ.ಪಿ.ಯೋಗೇಶ್ವರ್ ಯತ್ನಿಸಿದ್ದು, ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಈ ನಿಟ್ಟಿನಲ್ಲಿ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ದೆಹಲಿ ಭೇಟಿ ಬೆನ್ನಲ್ಲೇ ಯೋಗೇಶ್ವರ್ ರಾಜ್ಯ ಸರ್ಕಾರದ ವಿರುದ್ಧವೂ ಅಸಮಾಧಾನ ಹೊರಹಾಕಿದ್ದರಲ್ಲದೇ ಇದು ಮೂರು ಪಕ್ಷಗಳ ಹೊಂದಾಣಿಕೆ ಸರ್ಕಾರ ಎಂದು ಕಿಡಿಕಾರಿದ್ದರು. ಇದರ ಬೆನ್ನಲ್ಲೇ ಸಿ.ಪಿ ಯೋಗೇಶ್ವರ್ ವಿರುದ್ಧ ಸಹಿ ಸಂಗ್ರಹ ಆರಂಭವಾಗಿದ್ದು, ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದ್ದಾರೆ.