alex Certify BIG NEWS: ಸರ್ಕಾರದ ಲಾಕ್ ಡೌನ್ ಗೆ ಜನ ಡೋಂಟ್ ಕೇರ್; ಮಾರುಕಟ್ಟೆ, ರಸ್ತೆಗಳಲ್ಲಿ ಬಿಂದಾಸ್ ಓಡಾಟ; ಕಾಟಾಚಾರದ ಲಾಕ್ ಡೌನ್ ವಿರುದ್ಧ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರದ ಲಾಕ್ ಡೌನ್ ಗೆ ಜನ ಡೋಂಟ್ ಕೇರ್; ಮಾರುಕಟ್ಟೆ, ರಸ್ತೆಗಳಲ್ಲಿ ಬಿಂದಾಸ್ ಓಡಾಟ; ಕಾಟಾಚಾರದ ಲಾಕ್ ಡೌನ್ ವಿರುದ್ಧ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಟಫ್ ರೂಲ್ಸ್, ಲಾಕ್ ಡೌನ್ ಕಾಟಾಚಾರಕ್ಕಾಗಿ ಜಾರಿಗೆ ತಂದಂತಿದೆ. ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಜನರು ಬೇಕಾಬಿಟ್ಟಿಯಾಗಿ ಓಡಾಟ ನಡೆಸಿದ್ದು, ಮಾರುಕಟ್ಟೆಗಳಲ್ಲಿ ಜನಜಾತ್ರೆಯೇ ನಡೆದಿದೆ. ಆದರೂ ಪೊಲೀಸರಾಗಲಿ, ಅಧಿಕಾರಿಗಳಾಗಲಿ ತಡೆಯುವ ಪ್ರಯತ್ನವನ್ನೂ ಮಾಡುತ್ತಿಲ್ಲ.

ಮೇ 10ರಿಂದ 24ರವರೆಗೆ ರಾಜ್ಯ ಸರ್ಕಾರ ಕೊರೊನಾ ಕಟ್ಟಿಹಾಕಲು ಲಾಕ್ ಡೌನ್ ಜಾರಿ ಮಾಡಿದೆ. ಮೇ 12ವರೆಗೂ ಈಗಾಗಲೇ ಜಾರಿಯಲ್ಲಿರುವ ಜನತಾ ಕರ್ಫ್ಯೂ ಕೂಡ ಮುಂದುವರೆದಿದೆ. ಅದರೂ ಜನರು ಯಾವುದೇ ನಿಯಮಕ್ಕೂ ಕ್ಯಾರೇ ಎನ್ನುತ್ತಿಲ್ಲ. ವಾಹನಗಳಲ್ಲಿ ರಾಜಾರೋಷವಾಗಿ ಓಡಾಟ ನಡೆಸಿದ್ದು, ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಬೀದಿ ಬೀದಿಗಳಲ್ಲಿ ಸುತ್ತಾಟ ನಡೆಸಿದ್ದಾರೆ.

ಪಿತೃದೋಷ ಪರಿಹಾರಕ್ಕಾಗಿ ತಂದೆ-ತಾಯಿಯನ್ನೇ ಕೊಂದ ಮಗ

ಅದರಲ್ಲೂ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಆರಂಭವಾಗಿದೆ. ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರಾಗಿದೆ. ಕೆ.ಆರ್.ಮಾರುಕಟ್ಟೆ, ಯಶವಂತಪುರ, ಶಿವಾಜಿನಗರ, ಬ್ಯಾಟರಾಯನಪುರಗಳಲ್ಲಂತೂ ಜನಜಂಗಳಿ ಏರ್ಪಟ್ಟಿದ್ದು, ದೈಹಿಕ ಅಂತರವೂ ಇಲ್ಲ, ಮಾಸ್ಕ್ ಕೂಡ ಇಲ್ಲ. ಇದು ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲ ಮೈಸೂರು, ಹುಬ್ಬಳ್ಳಿ, ಬೀದರ್, ಬೆಳಗಾವಿ, ಕಲಬುರ್ಗಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲೂ ಜನರು ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿ ಬೇಜವಾಬ್ದಾರಿ ಮೆರೆಯುತ್ತಿದ್ದಾರೆ.

ಇದರಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕು ಇನ್ನಷ್ಟು ಹರಡುವುದರಲ್ಲಿ ಅನುಮಾನವೇ ಇಲ್ಲ ಎನ್ನಲಾಗಿದೆ. ಸರ್ಕಾರ ಜಾರಿಗೆ ತಂದಿರುವ ಕಾಟಾಚಾರದ ಕಾಮಿಡಿ ಲಾಕ್ ಡೌನ್ ಗೆ ಆಕ್ರೋಶ ವ್ಯಕ್ತವಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...