ಬೆಂಗಳೂರು: ಶೇ.30ರಷ್ಟು ಶುಲ್ಕ ಕಡಿತ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಸಿಡಿದೆದ್ದಿರುವ ಖಾಸಗಿ ಶಾಲೆಗಳು ಮತ್ತೆ ಪ್ರತಿಭಟನೆಗೆ ಮುಂದಾಗಿವೆ.
ಶುಲ್ಕ ಕಡಿತ ಆದೇಶವನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿ, ಕ್ಯಾಮ್ಸ್, ಮಿಕ್ಸಾ, ಕುಸುಮ, ಸಿಬಿಎಸ್ ಇ ಹಾಗೂ ಐಸಿಎಸ್ ಇ ಶಾಲೆಗಳ ಒಕ್ಕೂಟ ಫೆ.23ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.
ಶಾಲಾ ಮಕ್ಕಳ ಪೋಷಕರಿಗೆ ಬಿಗ್ ಶಾಕ್: ಪಾವತಿಸಬೇಕಿದೆ ಸಂಪೂರ್ಣ ಶುಲ್ಕ
ರಾಜ್ಯ ಸರ್ಕಾರ ಶೇ.30ರಷ್ಟು ಶಾಲಾ ಶುಲ್ಕ ಕಡಿತ ಮಾಡಲು ಸೂಚಿಸಿದೆ. ಆದರೆ ಆದೇಶದಲ್ಲಿ ಶೇ.55ರಿಂದ 65 ರಷ್ಟು ಶುಲ್ಕ ಕಡಿತವಾಗುತ್ತದೆ. ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಜೊತೆಗೆ ಶಿಕ್ಷಣ ಸಂಸ್ಥೆಗಳಿಗೂ ಹಣ ನೀಡಬೇಕು. 1-5ನೇ ತರಗತಿಗಳನ್ನೂ ಆರಂಭ ಮಾಡಲು ಅವಕಾಶ ನೀಡಬೇಕು. ಬಿಇಓ, ಡಿಡಿಪಿಐಗಳ ಭ್ರಷ್ಟಾಚಾರ ನಿಯಂತ್ರಿಸಲು ಸೂಕ್ತ ಕ್ರಮ ಸೇರಿದಂತೆ ವಿವಿಧ ಬೇಡಿಕೆಗಳನ್ನು ಫೆ.23ರೊಳಗೆ ಈಡೇರಿಸಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಫೆ.23ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಎಚ್ಚರಿಕೆ ನೀಡಿವೆ.