ಬೆಂಗಳೂರು: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಮುಷ್ಕರ ನಿರತ ಸಾರಿಗೆ ನೌಕರ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ, ಅತಿಯಾದ ಸಾಲದಿಂದ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಹೊರತು ಯಾರ ಕಿರುಕುಳದಿಂದಲೂ ಅಲ್ಲ ಎಂದು ತಿಳಿಸಿದ್ದಾರೆ.
ಬೀದರ್ ಜಿಲ್ಲೆ ಹುಮ್ನಾಬಾದ್ ನಲ್ಲಿ ಮಾತನಾಡಿದ ಸಚಿವ ಸವದಿ, ಅಧಿಕಾರಿಗಳ ಕಿರುಕುಳಕ್ಕೆ ಆತ್ಮಹತ್ಯೆ ಎಂದು ಸಾರಿಗೆ ಸಂಘಟನೆಗಳು ಇಲಾಖೆ ಮೇಲೆ ಕೆಟ್ಟ ಹೆಸರು ಬರುವಂತೆ ಆರೋಪಿಸುತ್ತಿದ್ದಾರೆ. ಆದರೆ ಸವದತ್ತಿಯಲ್ಲಿ ಸಾರಿಗೆ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಲದ ಕಾರಣದಿಂದಾಗಿ ಎಂದು ಹೇಳಿದರು.
ಪೆಟ್ರೋಲ್ ಎರಚಿ ಬೆದರಿಕೆ; ಮುಷ್ಕರ ನಿರತ ಕೆ.ಎಸ್.ಆರ್.ಟಿ.ಸಿ. ಚಾಲಕ ಸಸ್ಪೆಂಡ್
ಇನ್ನು ಇಂದಿನಿಂದ 1000ಕ್ಕೂ ಹೆಚ್ಚು ಸರ್ಕಾರಿ ಬಸ್ ಗಳು ಸಂಚರಿಸುತ್ತಿವೆ. ನಮ್ಮ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಲು ಸಿದ್ಧರಿದ್ದಾರೆ. ತಮಗೆ ಸಂಬಳ ಹೆಚ್ಚಿಸಿದರೆ ಸಾಕು ಎಂದು ಹೇಳುತ್ತಿದ್ದಾರೆ. ಆದರೆ ಮುಷ್ಕರ ನಿರತರು ನಮ್ಮ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಹಾಜರಾಗದಂತೆ ತಡೆಯುತ್ತಿದ್ದಾರೆ ಎಂದು ಆರೋಪಿಸಿದರು.