alex Certify BIG NEWS: ಹಬ್ಬದ ದಿನವೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಬ್ಬದ ದಿನವೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ಬೆಂಗಳೂರು: ಸಾರಿಗೆ ನೌಕರರ ಸಂಬಳ ವಿಳಂಬ ವಿಚಾರವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ವೇತನ ಬಿಡುಗಡೆಗೆ ಮನವಿ ಮಾಡಿರುವ ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಸಚಿವರ ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಮೂರು ತಿಂಗಳ ವೇತನ 634 ಕೋಟಿ ರೂಪಾಯಿ ತಕ್ಷಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಸಾರಿಗೆ ಸಿಬ್ಬಂದಿಗಳಿಗೆ ವೇತನ ಸಿಗಲಿದೆ.

ಈ ಕುರಿತು ಮಾತನಾಡಿರುವ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನ ಬಿಡುಗಡೆಗೆ ಸರ್ಕಾರ ಸ್ಪಂದಿಸಿದ್ದು, ತಕ್ಷಣ ಹಣ ಬಿಡುಗಡೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳ ಶೇ.75 ರಷ್ಟು ವೇತನದ ಮೊತ್ತ 634.50 ರೂಪಾಯಿಗಳನ್ನು ಬಿಡುಗಡೆ ಮಾಡಲು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...