ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಅದರಲ್ಲಿ ಏನಾದರೂ ಸಮಸ್ಯೆಗಳು ಇದ್ದರೆ ಬಗೆ ಹರಿಸೋಣ. ಆದರೆ ಸಂಕಷ್ಟದ ಸಂದರ್ಭದಲ್ಲಿ ಹಠಕ್ಕೆ ಬಿದ್ದು ಮುಷ್ಕರ ನಡೆಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಾರಿಗೆ ನೌಕರರ 8 ಬೇಡಿಕೆಗಳಲ್ಲಿ ಏನಾದರೂ ಸಮಸ್ಯೆಗಳಾಗಿದ್ದರೆ ಅದನ್ನು ಸರಿಪಡಿಸುತ್ತೇವೆ. ಆದರೆ 6ನೇ ವೇತನ ಆಯೋಗ ಜಾರಿ ಮಾತ್ರ ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬಿಎಂಟಿಸಿ ಎಂಡಿ ಹಾಗೂ ಕೋಡಿಹಳ್ಳಿಗೆ 10 ಲಕ್ಷ ಪರಿಹಾರ ಕೇಳಿ ನೋಟೀಸ್ ಜಾರಿ ಮಾಡಿದ ವಿದ್ಯಾರ್ಥಿನಿ
ಸಾರಿಗೆ ಇಲಾಖೆ ಇರುವುದು ಸಾರ್ವಜನಿಕರ ಸೇವೆಗಾಗಿ. ಬಸ್ ಸಂಚಾರವಿಲ್ಲದೇ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಜನರ ಸಂಕಷ್ಟವನ್ನು, ಸರ್ಕಾರದ ಹಣಕಾಸಿನ ಕೊರತೆಯನ್ನು ಅರ್ಥಮಾಡಿಕೊಂಡು ಕರ್ತವ್ಯಕ್ಕೆ ಹಾಜರಾಗಿ ಎಂದು ಮನವಿ ಮಾಡಿದರು.
ಇಂದಿನ ಪರಿಸ್ಥಿತಿಯಲ್ಲಿ 6ನೇ ವೇತನ ಆಯೋಗ ಜಾರಿ ಮಾಡಲು ಸಾಧ್ಯವೇ ಇಲ್ಲ. ಹಠವನ್ನು ನಿಲ್ಲಿಸಿ ಕೆಲಸಕ್ಕೆ ಹಾಜರಾಗಿ. ಯಾರದೋ ಮಾತು ಕೇಳಿ ಈ ರೀತಿ ಮುಷ್ಕರ ಮಾಡುವುದು ಸರಿಯಲ್ಲ ಎಂದು ಹೇಳಿದರು.