ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಒಂದು ವೇಳೆ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿ ವಾಹನ ಚಲಾಯಿಸಿದರೆ ಅಂತಹ ವಾಹನಗಾನ್ನು ಸೀಜ್ ಮಾಡಲಾಗುವುದು. ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದರೆ ಅಂತಹ ಕಲ್ಯಾಣ ಮಂಟಪ, ಸಭಾ ಭವನಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ಅವ್ಯವಸ್ಥೆ: ಅನು ಪ್ರಭಾಕರ್ ಆಕ್ರೋಶ
ಕಳೆದಬಾರಿ ಆದ ಅನುಭವ ನಮಗೆ ನೆನಪಿದೆ. ಪೊಲೀಸರು ಏಕಾಏಕಿ ಲಾಠಿ ಕೈಗೆತ್ತಿಕೊಳ್ಳುವುದಿಲ್ಲ. ಆದರೆ ಕರ್ಫ್ಯೂ ವೇಳೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಖಾಸಗಿ ಆಸ್ಪತ್ರೆಗಳು 7000 ಬೆಡ್ ವ್ಯವಸ್ಥೆ ಮಾಡಿವೆ. ಇನ್ನೂ 4000 ಬೆಡ್ ನೀಡಬೇಕಾಗಿದೆ. ಬಿಬಿಎಂಪಿಯ 8 ಜಂಟಿ ಆಯುಕ್ತರು ಬೆಡ್ ವ್ಯವಸ್ಥೆ ಬಗ್ಗೆ ಆಯಾ ವಲಯಗಳಲ್ಲಿ ನೋಡಿಕೊಳ್ಳಲಿದ್ದಾರೆ. ವಲಯವಾರು ಡಿಸಿಪಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದರು.