alex Certify ಸಿಡಿ ಪ್ರಕರಣ; ಪತ್ರಕರ್ತನ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್ಐಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಪ್ರಕರಣ; ಪತ್ರಕರ್ತನ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್ಐಟಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕಿಂಗ್ ಪಿನ್ ಎಂದೇ ಹೇಳಲಾಗುತ್ತಿರುವ ಮಾಜಿ ಪತ್ರಕರ್ತ ನರೇಶ್ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಹೇಳಿಕೆಯ ಮೂಲ ಇದೀಗ ಪತ್ತೆಯಾಗಿದೆ.

ನಿನ್ನೆ ನರೇಶ್, ಸಿಡಿ ಪ್ರಕರಣಕ್ಕೂ ತನಗೂ ಯಾವುದೇ ಸಂಬಂಧವಿಲ್ಲ. ಪ್ರಕರಣದಲ್ಲಿ ಅನಗತ್ಯವಾಗಿ ನನ್ನನ್ನು ಸಿಲುಕಿಸುವ ಯತ್ನ ನಡೆದಿದೆ ಎಂದು 8 ನಿಮಿಷಗಳ ವಿಡಿಯೋ ಬಿಡುಗಡೆ ಮಾಡಿದ್ದರು. ಅಲ್ಲದೇ ರಮೇಶ್ ಜಾರಕಿಹೊಳಿ ಮಾಡಬಾರದ ತಪ್ಪು ಮಾಡಿದ್ದಾರೆ. ಯುವತಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದರು. ಇದೀಗ ಈ ವಿಡಿಯೋ ಮೂಲವನ್ನು ಎಸ್ಐಟಿ ಪತ್ತೆ ಮಾಡಿದೆ.

ಮಾಜಿ ಮುಖ್ಯಮಂತ್ರಿಗೆ ಬಿಗ್ ಶಾಕ್: ಕೈತಪ್ಪಿದ ಕಾಂಗ್ರೆಸ್ ಟಿಕೆಟ್ – ಚುನಾವಣೆ ಉಸ್ತುವಾರಿಯಾದ ಹಿರಿಯ ನಾಯಕ

ನರೇಶ್ ಬಿಡುಗಡೆ ಮಾಡಿರುವ ವಿಡಿಯೋ ದೆಹಲಿಯಿಂದ ಅಪ್ ಲೋಡ್ ಆಗಿದೆ ಎಂದು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಲ್ಲದೇ ಸಿಡಿ ಲೇಡಿಯ ಮೊಬೈಲ್ ಕೂಡ ದೆಹಲಿಯಲ್ಲಿ ನಿನ್ನೆ ಮಧ್ಯಾಹ್ನ ಆನ್ ಆಗಿ ಮತ್ತೆ ಆಫ್ ಆಗಿದೆ ಎಂಬ ವಿಚಾರ ಕೂಡ ಇದೀಗ ಬಯಲಾಗಿದೆ. ಇದೇ ವೇಳೆ ಎಸ್ಐಟಿ ಅಧಿಕಾರಿಗಳು ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...