ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ವಿಡಿಯೋದಲ್ಲಿದ್ದ ಯುವತಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಡಿ ಪ್ರಕರಣದಲ್ಲಿದ್ದ ಸಂತ್ರಸ್ತ ಯುವತಿ ದೂರುದಾರ ದಿನೇಶ್ ಕಲ್ಲಹಳ್ಳಿ ಉಲ್ಲೇಖಿಸಿದಂತೆ ಪಿ.ಜಿಯಲ್ಲಿ ಇರಲಿಲ್ಲ. ಬದಲಾಗಿ ಆಕೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಯುವತಿಯನ್ನು ವಿಚಾರಣೆಗೆ ಕರೆದು ಹೇಳಿಕೆ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಿಜೆಪಿ ಫೈರ್ ಬ್ರಾಂಡ್ ಅನಂತಕುಮಾರ್ ಹೆಗಡೆ ರಾಜಕೀಯ ನಿವೃತ್ತಿ..?
ದಿನೇಶ್ ಕಲ್ಲಹಳ್ಳಿ ದೂರಿನ ಮೇರೆಗೆ ನಿನ್ನೆ ಪೊಲಿಸರು ಆರ್.ಟಿ.ನಗರದ 45 ಪಿ.ಜಿಗಳಲ್ಲಿ ಪರಿಶೀಲನೆ ನಡೆಸಿದ್ದರು. ಆದರೆ ಯುವತಿಯ ಸುಳಿವು ಸಿಕ್ಕಿರಲಿಲ್ಲ. ಅಂತಿಮವಾಗಿ ಆರ್.ಟಿ.ನಗರ ವ್ಯಾಪ್ತಿಯ ಮನೆಯೊಂದರಲ್ಲಿ ಯುವತಿ ಬಾಡಿಗೆಗೆ ವಾಸವಿರುವುದು ಗೊತ್ತಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕಟ್ಟಡದ ಮಾಲೀಕನಿಂದ ಮಾಹಿತಿ ಕಲೆಹಾಕಿದ್ದು, ಯುವತಿಯ ಮನೆಯನ್ನು ಪರಿಶೀಲಿಸಿದ್ದಾರೆ. ಆದರೆ ಅಲ್ಲಿ ಯುವತಿ ಇಲ್ಲ ಹಾಗಾಗಿ ವಾಪಸ್ ಆಗಿದ್ದಾರೆ.
2018ರಿಂದ ಯುವತಿ ಬಾಡಿಗೆ ಮನೆಯಲ್ಲಿ ವಾಸವಿರುವುದು ಗೊತ್ತಾಗಿದೆ. ಮಾ.1ರವರೆಗೂ ಯುವತಿ ಅದೇ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಆದರೆ ಮಾ.2ರಿಂದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ.