ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ.ಸೋಮಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ದು ಕಾಂಗ್ರೆಸ್ನವರೇ. ನಾನೂ ಕೂಡ 20 ವರ್ಷ ಕಾಂಗ್ರೆಸ್ ನಲ್ಲಿದ್ದೆ. ಇಂಥಹ ಕಥಾನಕಗಳು ಅವರದ್ದೇ. ಕಾಂಗ್ರೆಸ್ ನವರು ಏನೆಲ್ಲಾ ಮಾಡುತ್ತಾರೆ ಎಂಬುದು ನನಗೂ ಗೊತ್ತು. ಇಂಥ ಮನೆ ಹಾಳ ಕೆಲಸ ಮಾಡುವುದು ಅವರೇ ಎಂದು ನೇರವಾಗಿ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್…! ಸಿಗಲಿದೆ ಆತ್ಮೀಯ ಭತ್ಯೆಯ ಮೂರು ಕಂತು
ಸಿಡಿ ಕೇಸ್ ನ್ನು ಮೊದಲು ಸಿಬಿಐ ತನಿಖೆಗೆ ಒಪ್ಪಿಸಲಿ. ಸತ್ಯಾಸತ್ಯತೆ ಹೊರಬರಲಿ ಎಂಬುದು ನಮ್ಮೆಲ್ಲರ ಒತ್ತಾಯ. ಕಾಂಗ್ರೆಸ್ ನವರಿಗೆ ತಾಕತ್ತಿದ್ದರೆ ರಮೇಶ್ ಜಾರಕಿಹೊಳಿ ವಿರುದ್ಧ ಅಥವಾ ನನ್ನ ವಿರುದ್ಧ ಸ್ಪರ್ಧಿಸಲಿ. ರಾಜಕೀಯವಾಗಿ ಕಣಕ್ಕಿಳಿದು ಸೆಣಸಾಡೋಣ. ಆದರೆ ಈ ರೀತಿ ತೇಜೋವಧೆ ಮಾಡುವ ಕೆಲಸ ಸರಿಯಲ್ಲ ಎಂದು ಹೇಳಿದರು.