ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆ ಮುಂದೂಡಲಾಗಿದ್ದು, ಮರು ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ.
ತಾಂತ್ರಿಕ ಹಾಗೂ ವೃತ್ತಿಪರ ಕೋರ್ಸ್ ಗಳಿಗೆ ಜುಲೈ 7ರಿಂದ ನಡೆಯಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿಯನ್ನು ಮುಂದೂಡಲಾಗಿದ್ದು, ಆಗಸ್ಟ್ 28, 29 ಹಾಗೂ 30ರಂದು ಪರೀಕ್ಷಾ ದಿನಾಂಕ ಮರು ನಿಗದಿ ಮಾಡಲಾಗಿದೆ.
2 ತಿಂಗಳ ಕಾಲ ಜಾರಿಯಾಗುತ್ತಾ ದೇಶದಲ್ಲಿ ಕಂಪ್ಲೀಟ್ ಲಾಕ್ ಡೌನ್…!
ಆಗಸ್ಟ್ 28ರಂದು ಜೀವಶಾಸ್ತ್ರ ಹಾಗೂ ಗಣಿತ, ಆಗಸ್ಟ್ 29ರಂದು ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರ ಹಾಗೂ ಆಗಸ್ಟ್ 30ರಂದು ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಿಗದಿ ಮಾಡಲಾಗಿದೆ.