ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಒಂದೆಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಕಾವೇರಿ ನಿವಾಸದಲ್ಲಿ ಬಜೆಟ್ ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ ಇನ್ನೊಂದೆಡೆ ಪಂಚಮಸಾಲಿ ಸಮುದಾಯದ ಮಹಿಳಾ ಮುಖಂಡರು ಸಿಎಂ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳ ಮೃತದೇಹ ಪತ್ತೆ
ವೀಣಾ ಕಾಶಪ್ಪನವರ್ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದ ಸಾವಿರಾರು ಮಹಿಳೆಯರು ಸಿಎಂ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿದ್ದಾರೆ.
ಪೊಲೀಸರು ಪ್ರತಿಭಟನಾ ನಿರತ ಮಹಿಳೆಯರ ಮನವೊಲಿಕೆಗೆ ಯತ್ನಿಸುತ್ತಿದ್ದಾರೆ. ಆದರೆ ಯಾವುದೇ ಮನವೊಲಿಕೆಗೂ ಬಗ್ಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ನಿವಾಸದ ಎದುರು ಹೈಡ್ರಾಮ ಶುರುವಾಗಿದೆ.