ಬೆಂಗಳೂರು: ರಾಜ್ಯಾದಂತ ಕೊರೊನಾ 2ನೇ ಅಲೆ ಅಟ್ಟಹಾಸ ಮುಂದುವರೆದಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೂ ಕೊರೊನಾ ಸೋಂಕು ತಗುಲಿದೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಕುಮಾರಸ್ವಾಮಿ, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ʼಕೊರೊನಾʼ ಲೆಕ್ಕಿಸದೆ ಸಗಣಿ ಎರಚಿ ಸಂಭ್ರಮಿಸಿದ ಜನ…!
ಕೆಲ ದಿನಗಳ ಹಿಂದಷ್ಟೇ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈಗಷ್ಟೇ ಚಿಕಿತ್ಸೆಯಿಂದ ಅವರು ಚೇತರಿಸಿಕೊಳ್ಳುತ್ತಿದ್ದು, ಇದೀಗ ಅವರ ಪುತ್ರ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.