ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ನೀಡಿದ್ದ ಹೇಳಿಕೆಗೆ ಇದೀಗ ಸಚಿವ ಎಸ್.ಟಿ.ಸೋಮಶೇಖರ್ ಯೂಟರ್ನ್ ಹೊಡೆದಿದ್ದಾರೆ.
ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸೋಮಶೇಖರ್, ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಕಾಂಗ್ರೆಸ್ ನವರೇ ಇದೆಲ್ಲವನ್ನೂ ಮಾಡಿದ್ದು, ರಮೇಶ್ ಜಾರಕಿಹೊಳಿ ತೇಜೋವಧೆ ಮಾಡಿರುವುದು ಕಾಂಗ್ರೆಸ್ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಚಿವ ಸೋಮಶೇಖರ್ ಅವರನ್ನು ಭೇಟಿಯಾಗಿದ್ದರು. ಗೃಹ ಸಚಿವರ ಭೇಟಿ ಬಳಿಕ ಸಚಿವರು ತಾನು ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ ಎಂದು ಹೇಳಿಯೇ ಇಲ್ಲ ಎಂದಿದ್ದಾರೆ.
ಸಾಹುಕಾರ್ ಸಿಡಿ’ ಬಗ್ಗೆ ಸಚಿವ ಸೋಮಶೇಖರ್ ಹೊಸ ಬಾಂಬ್
ಸಿಡಿ ಕಾಂಗ್ರೆಸ್ ಕೈವಾಡ ಎಂದು ನಾನು ಹೇಳಿಲ್ಲ. ರಮೇಶ್ ಜಾರಕಿಹೊಳಿ ಅವರೇ ಈ ಬಗ್ಗೆ ಹೇಳಿದ್ದಾರೆ. ಜಾರಕಿಹೊಳಿ ಏನು ಹೇಳಿದ್ದಾರೆ ಎಂದು ನಾನು ಹೇಳಲಾಗುವುದಿಲ್ಲ. 20 ವರ್ಷ ನಾನು ಕಾಂಗ್ರೆಸ್ ನಲ್ಲಿದ್ದೆ ಕಾಂಗ್ರೆಸ್ ಅನೈತಿಕತೆ ಬಗ್ಗೆ ಗೊತ್ತಿದೆ ಎಂದಷ್ಟೇ ನಾನು ಹೇಳಿದ್ದೆ ಎಂದು ಉಲ್ಟಾ ಹೊಡೆದಿದ್ದಾರೆ.