ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಿಜೆಪಿ ಮತ್ತೊಂದು ಶಾಕ್ ನೀಡುವ ಸಾಧ್ಯತೆ ದಟ್ಟವಾಗಿದೆ.
ಸಿಡಿ ಪ್ರಕರಣದ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ರಮೇಶ್ ಜಾರಕಿಹೊಳಿಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆದುಕೊಂಡಿದ್ದರು. ಇದೀಗ ರಮೇಶ್ ಜಾರಕಿಹೊಳಿಯನ್ನು ರಾಜಕೀಯದಿಂದಲೇ ದೂರ ಇಡುವ ಬಗ್ಗೆ ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
‘ಸಿಡಿ’ ಪ್ರಕರಣ: ಬಯಲಾಯ್ತು ಮತ್ತೊಂದು ರಹಸ್ಯ –ಇನ್ನಷ್ಟು ಮಹತ್ವದ ಸಂಗತಿ ಬೆಳಕಿಗೆ
ಬೆಳಗಾವಿ ಲೋಕಸಭಾ ಉಪಚುನಾವಣೆ ಘೋಷಣೆಯಾಗಿದ್ದು, ರಮೇಶ್ ಜಾರಕಿಹೊಳಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ನೇಮಕವಾಗಿದ್ದರು. ಆದರೆ ಈಗ ಸಿಡಿ ಪ್ರಕರಣ ಸ್ಫೋಟಗೊಂಡಿರುವುದರಿಂದ ಬಿಜೆಪಿಗೆ ಸಮಸ್ಯೆ ಎದುರಾಗಿದೆ.
ಕಾಂಗ್ರೆಸ್ ಸಿಡಿ ವಿಚಾರವನ್ನೇ ಅಸ್ತ್ರವನ್ನಾಗಿಸಿಕೊಂಡು ಚುನಾವಣೆ ಪ್ರಚಾರದಲ್ಲಿ ಬಿಜೆಪಿ ಮಣಿಸಲು ಮುಂದಾಗಿದೆ. ಹೀಗಾಗಿ ಮುಜುಗರದಿಂದ ತಪ್ಪಿಸಿಕೊಳ್ಳುವ ಸಲುವಾಗಿ ರಮೇಶ್ ಜಾರಕಿಹೊಳಿಗೆ ಉಸ್ತುವಾರಿಯಿಂದ ಬದಲಾವಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.