ಬೆಂಗಳೂರು: ಸಿಡಿ ಘಟನೆ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.
ಕಾಂಗ್ರೆಸ್ ಟ್ವಿಟ್ ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಆ ಘಟನೆ ಹಿಂದೆ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ. ಆ ಮಹಾ ನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಕುಟುಕಿದೆ.
ಅಲ್ಲದೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ? ಎಂದು ಪ್ರಶ್ನಿಸಿದೆ.