alex Certify BIG NEWS: ಸಿನಿಮಾ, ಸೀರಿಯಲ್ ಸೇರಿದಂತೆ ಚಿತ್ರೀಕರಣಕ್ಕೂ ಬ್ರೇಕ್ ಹಾಕಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿನಿಮಾ, ಸೀರಿಯಲ್ ಸೇರಿದಂತೆ ಚಿತ್ರೀಕರಣಕ್ಕೂ ಬ್ರೇಕ್ ಹಾಕಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ನಾಳೆ ರಾತ್ರಿಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಿದೆ. ಈ ನಿಯಮ ಚಿತ್ರೋದ್ಯಮದ ಚಟುವಟಿಕೆಗಳ ಮೇಲೂ ಅನ್ವಯವಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋ ಸೇರಿದಂತೆ ಎಲ್ಲಾ ರೀತಿಯ ಚಿತ್ರೀಕರಣವನ್ನು 14 ದಿನಗಳವರೆಗೆ ಬಂದ್ ಮಾಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿತ್ರ ಮಂದಿರಗಳಿಂದ ಪ್ರೇಕ್ಷಕರು ದೂರ ಉಳಿದಿದ್ದು, ಈಗಾಗಲೇ ಥಿಯೇಟರ್ ಗಳ ಬಾಗಿಲು ಮುಚ್ಚಿವೆ. ಇದೀಗ ಕಠಿಣ ನಿಯಮ ಜಾರಿ ಹಿನ್ನೆಲೆಯಲ್ಲಿ ಶೂಟಿಂಗ್ ಗಳಿಗೂ ಸರ್ಕಾರ ನಿಷೇಧ ಹೇರಿರುವುದು ಸಿನಿಮೋದ್ಯಮಕ್ಕೆ ಸಂಕಷ್ಟ ಎದುರಾದಂತಾಗಿದೆ.

ಕೊರೊನಾ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಮಾದರಿಯ 14 ದಿನಗಳ ಕಠಿಣ ನಿಯಮ ಜಾರಿ ಮಾಡಿದ್ದು, ಇದನ್ನು ಕೋವಿಡ್ ಕರ್ಫ್ಯೂ ಎಂದೇ ಕರೆಯಲಾಗುತ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...