ಬೆಂಗಳೂರು: ಸಿಲಿಕಾನ್ ಸಿಟಿಯ ವಿವಿಧೆಡೆಗಳಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕುದುರೆ ರೇಸ್, ಜೂಜಾಟಗಳಲ್ಲಿ ತೊಡಗಿದ್ದ 30 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರೇಸ್ ಕೋರ್ಸ್ ಒಳಗೆ ಕುದುರೆ ರೇಸ್ ಬೆಟ್ಟಿಂಗ್ ನಡೆಸುತ್ತಿದ್ದವರ ಮೇಲೆ ದಾಳಿ ನದೆಸಿದ ಪೊಲೀಸರು 11 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 2 ಲಕ್ಷದ 56 ಸಾವಿರ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಾಹನ ಸವಾರರಿಗೆ ಮುಖ್ಯ ಮಾಹಿತಿ: ನಾಳೆಯಿಂದ ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ
ಕಿಂಗ್ಸ್ ಪೋರಂ, ಸ್ಫೋರ್ಟ್ಸ್ ಕಲ್ಚರಲ್ ಅಸೋಸಿಯೇಷನ್ ಕ್ಲಬ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು, 19 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 3 ಲಕ್ಷದ 2 ಸಾವಿರದ 450 ರೂ. ಜಪ್ತಿ ಮಾಡಿದ್ದಾರೆ.
ಇದೇ ವೇಳೆ ಬಸವೇಶ್ವರ ನಗರ ಕ್ಲಬ್ ನಲ್ಲಿ ಜೂಜಾಟ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಜೂಜಾಟ, ಕುದುರೆ ರೇಸ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಒಟ್ಟು 30 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.