ಬೆಂಗಳೂರು: ಹನಿ ಟ್ರ್ಯಾಪ್ ಮಾಡುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ಖಾಸಗಿ ಸುದ್ದಿ ವಾಹಿನಿ ಮಾಲೀಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿ ಮಾಲೀಕ ವಿರೇಶ್, ಜಾನ್ ಕೆನಡಿ, ನಿರ್ಮಲ್ ಬಾಬು ಹಾಗೂ ಇನ್ನೋರ್ವ ಆರೋಪಿಯನ್ನು ಬಂಧಿಸಲಾಗಿದೆ.
ಸಾರ್ವಜನಿಕ ಶೌಚಾಲಯದಲ್ಲಿ ಮೊಟ್ಟೆ, ಮಾಂಸ ಮಾರಾಟ..!
ಆರೋಪಿಗಳು ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿ 34 ಲಕ್ಷ ರೂ.ವಸೂಲಿ ಮಾಡಿದ್ದರು. ಬಳಿಕ ಮತ್ತೆ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದರು. ಇಲ್ಲವಾದಲ್ಲಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ತಮಿಳುನಾಡು ಮೂಲದ ಶೇಖರ್ ಎಂಬುವವರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ನಾಲ್ವರನ್ನು ಬಂಧಿಸಿದ್ದಾರೆ.