alex Certify BIG NEWS: ಹಿಂದಿ ಹೇರಿಕೆ ಕುರಿತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಖಡಕ್‌ ಟ್ವೀಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದಿ ಹೇರಿಕೆ ಕುರಿತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಖಡಕ್‌ ಟ್ವೀಟ್

ಕರ್ನಾಟಕದಲ್ಲಿ ಈಗಾಗಲೇ ಹಿಂದಿ ಏರಿಕೆ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಈ ಕುರಿತು ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಕನ್ನಡದ ಮೇಲಿನ ತಮ್ಮ ಪ್ರೀತಿಯನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಬರೆದುಕೊಂಡಿದ್ದಾರೆ.

ಬಹಳ ವರ್ಷದಿಂದಲೂ ಈ ಹಿಂದಿ ಏರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ. ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ ಮುಂದೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರವಾಗುವ ದಿನಗಳು ಹತ್ತಿರದಲ್ಲೇ ಇದೆ.

ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರಭಾಷೆ. ಕನ್ನಡಿಗರ ತೆರಿಗೆ ಹಣದಲ್ಲಿ ʼಹಿಂದಿ ದಿವಸ್ʼ ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದರೆ ಒಳಿತು. ವೈವಿಧ್ಯತೆಯಲ್ಲಿ ಏರಿಕೆಯನ್ನು ಕಾಣುವುದು ನಮ್ಮ ಭಾರತ ಸಂವಿಧಾನದ ಪ್ರತೀಕವಾಗಿದೆ. ಯಾವುದೋ ಉತ್ತರದ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಏರಿ ನಮ್ಮ ಸಂಸ್ಕೃತಿ, ಭಾಷೆ, ನೆಲೆಯನ್ನು ಕಸಿದುಕೊಳ್ಳುವುದು ಹೀನಾಯಕರ ಸಂಗತಿಯೆಂದರೆ ತಪ್ಪಾಗಲಾರದು. ನನ್ನ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತ್ತೇವೆ. ಕನ್ನಡವೇ ಸತ್ಯ. ಕನ್ನಡವೇ ನಿತ್ಯ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರೆದುಕೊಂಡಿದ್ದಾರೆ.

View this post on Instagram

ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ. ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ ಮುಂದೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರವಾಗುವ ದಿನಗಳು ಹತ್ತಿರದಲ್ಲೇ ಇದೆ. ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದರೆ ಒಳಿತು. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವುದು ನಮ್ಮ ಭಾರತ ಸಂವಿಧಾನದ ಪ್ರತೀಕವಾಗಿದೆ. ಯಾವುದೋ ಉತ್ತರದ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಹೇರಿ ನಮ್ಮ ಸಂಸ್ಕೃತಿ, ಭಾಷೆ, ನೆಲೆಯನ್ನು ಕಸಿದುಕೊಳ್ಳುವುದು ಹೀನಾಯಕರ ಸಂಗತಿಯೆಂದರೆ ತಪ್ಪಾಗಲಾರದು. ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ

A post shared by Darshan Thoogudeepa Shrinivas (@darshanthoogudeepashrinivas) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...