alex Certify BIG NEWS: ಹಿಂಸಾಚಾರದ ಕಳಂಕ ರೈತರ ತಲೆಗೆ ಕಟ್ಟಬಾರದು – ಘಟನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆ ಎಂದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂಸಾಚಾರದ ಕಳಂಕ ರೈತರ ತಲೆಗೆ ಕಟ್ಟಬಾರದು – ಘಟನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆ ಎಂದ ಕುಮಾರಸ್ವಾಮಿ

ಬೆಂಗಳೂರು: ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರೈತರನ್ನು ದೂಷಣೆ ಮಾಡುವುದು ಅಕ್ಷಮ್ಯ. ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ರೈತನ ತಲೆಗೆ ಕಟ್ಟಬಾರದು. ಆಡಳಿತದಲ್ಲಿರುವವರು ಇದನ್ನು ತಪ್ಪಿಸಬಹುದಿತ್ತು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಕುಮಾರಸ್ವಾಮಿ, ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರ ಘಟನೆಗೆ ರೈತರನ್ನು ದೂಷಿಸುವಂಥ ಹೇಳಿಕೆಗಳು, ಅಭಿಪ್ರಾಯಗಳನ್ನು ಕೇಳಿ ಮನಸ್ಸಿಗೆ ನೋವಾಗಿದೆ. ಘಟನೆ ಯಾಕೆ ಆಯಿತು, ಹೇಗೆ ಆಯಿತು, ಘಾತಕ ಶಕ್ತಿಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆ ಮಾಡದೇ ರೈತರನ್ನು ದೂಷಿಸುವುದು ಸರಿಯಲ್ಲ ಎಂದಿದ್ದಾರೆ.

ಸುಪ್ರೀಂ ಕೋರ್ಟ್‌ ಕೂಡ ಇದು ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆ ಎಂದಿದೆ. ಅದರೆ ಹಾಗೆ ಮಾಡದೇ ಇರುವುದು ಬೇಸರದ ಸಂಗತಿ. ಈ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು.

ರೈತರ ಹೋರಾಟ: ಸ್ವಾಮಿ ವಿವೇಕಾನಂದರ ಮಾತು ನೆನಪಿಸಿದ ಮಾಜಿ ಸಚಿವ ಯು.ಟಿ. ಖಾದರ್

ಹಿಂಸಾಚಾರ ಪ್ರಕರಣದಲ್ಲಿ ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ. ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾಗಲೇ ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...