ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯಪಾಲ ವಿ.ಆರ್.ವಾಲಾ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಕಠಿಣ ನಿಯಮ ಹಾಗೂ ಲಾಕ್ ಡೌನ್ ಜಾರಿ ಮಾಡುವ ಕುರಿತು ವಿವಿಧ ಪಕ್ಷಗಳ ನಾಯಕರು ಸಲಹೆ ನೀಡಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಮಾಡುವ ಅಗತ್ಯವಿದೆ. 15 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕೋವಿಡ್ ಕೇಸ್ ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡುವಂತೆ ಸಲಹೆ ನೀಡಿದ್ದಾರೆ.
ರಾಹುಲ್ ಗಾಂಧಿ ಚೇತರಿಕೆಗೆ ಮೋದಿ ಹಾರೈಕೆ
ಕಳೆದಬಾರಿ ಲಾಕ್ ಡೌನ್ ಜಾರಿ ಮಾಡಿದಾಗ ಆರ್ಥಿಕ ಸಂಕಷ್ಟ ಎದುರಾಗಿದ್ದು ನಿಜ. ಆದರೆ ಸಧ್ಯದ ಕೋವಿಡ್ ಪರಿಸ್ಥಿತಿ ಗಮನಿಸಿದರೆ ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಅನಿವಾರ್ಯ. 15 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಿ ಬಡವರಿಗೆ 1 ತಿಂಗಳ ಆರ್ಥಿಕ ನೆರವು ನೀಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ನೈಟ್ ಕರ್ಫ್ಯೂ ಜಾರಿಯಿಂದ ಯಾವುದೇ ಪ್ರಯೋಜನವಾಗದು. ಇದರಿಂದ ಸೋಂಕು ನಿಯಂತ್ರಣ ಸಾಧ್ಯವೂ ಇಲ್ಲ ಎಂದು ಅಭಿಪ್ರಾಯಪಟ್ಟಿರುವ ಕುಮಾರಸ್ವಾಮಿ ಅಧಿಕಾರಿಗಳ ಮೂಲಕ ಆರ್ಥಿಕ ನೆರವು ಸಾಧ್ಯವಿಲ್ಲ ಹಾಗಾಗಿ ಪರ್ಯಾಯ ಮಾರ್ಗದ ಮೂಲಕ ಬಡವರಿಗೆ ಆರ್ಥಿಕ ನೆರವು ತಲುಪುವಂತೆ ಮಾಡಬೇಕು ಎಂದು ಹೇಳಿದ್ದಾರೆ.