ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ 2 ತಿಂಗಳ ಕಾಲ ಲಾಕ್ ಡೌನ್ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಇಂದು ನಡೆಯಲಿರುವ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟವಾಗಲಿದೆ.
ಕೊರೊನಾ ನಿಯಂತ್ರಣಕ್ಕೆ 6-8 ವಾರಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಜಾರಿ ಅಗತ್ಯವಿದೆ ಎಂದು ಐಸಿಎಂಆರ್ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ಟಾಸ್ಕ್ ಫೋರ್ಸ್ ಸಭೆ ಮಹತ್ವ ಪಡೆದಿದ್ದು, ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಭೆಯಲ್ಲಿ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಡಿಸಿಎಂ ಅಶ್ವತ್ಥ ನಾರಾಯಣ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ ಆರಂಭವಾಗಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್, ಸುರೇಶ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಲಕ್ಷದ್ವೀಪದಲ್ಲಿ ಕೋವಿಡ್ ರೋಗಿಯ ಸಹಾಯಕ್ಕೆ ನಿಂತ ಭಾರತೀಯ ನೌಕಾಪಡೆ
ಶೇ.10ರಷ್ಟು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಕೊರೊನಾ ಚೈನ್ ಲಿಂಕ್ ಬ್ರೇಕ್ ಮಾಡಲು ಕಠಿಣ ಕ್ರಮ ಅನಿವಾರ್ಯ ಎಂದು ಐಸಿಎಂಆರ್ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗಿರುವ ಲಾಕ್ ಡೌನ್ ಮೇ 24ರ ಬಳಿಕವೂ ವಿಸ್ತರಣೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.