ಬೆಂಗಳೂರು: ರಾಜ್ಯ ಸರ್ಕಾರ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚಿಂತನೆ ನಡೆಸುತ್ತಿರುವ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿದ್ದು, ಮಹತ್ವ ಪಡೆದುಕೊಂಡಿದೆ.
ಸುರಕ್ಷಿತ ಲೈಂಗಿಕ ಜೀವನಕ್ಕೆ ಎರಡು ಕಾಂಡೋಮ್ ಒಳ್ಳೆಯದು….!?
ಕೊರೊನಾ ಸೋಂಕು ಹೆಚ್ಚುತ್ತಿರುವ 5 ಜಿಲ್ಲೆಗಳ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದು, ಮೈಸೂರು, ಬೆಳಗಾವಿ, ಕಲಬುರ್ಗಿ, ವಿಜಯಪುರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಭಾಗವಹಿಸಿದ್ದಾರೆ.
ಟಿಕೆಟ್ ದರ ಶೇಕಡ 15 ರಷ್ಟು ಹೆಚ್ಚಳದೊಂದಿಗೆ ಸರ್ಕಾರದಿಂದ ಬಿಗ್ ಶಾಕ್, ವಿಮಾನಗಳಲ್ಲಿ ಪ್ರಯಾಣಿಕರ ಸಾಮರ್ಥ್ಯ ಸಂಖ್ಯೆ ಕಡಿತ
ಜಿಲ್ಲೆಗಳಲ್ಲಿ ಕೊರೊನಾ ಸ್ಥಿತಿಗತಿ, ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಇನ್ನಷ್ಟು ಕಠಿಣ ಕ್ರಮ, ಕೊರೊನಾ 3ನೇ ಅಲೆ ಬಗ್ಗೆ ಕೈಗೊಳ್ಳಬೇಕಿರುವ ಸಿದ್ಧತೆ, ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಡಿಸಿಎಂ ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಸಚಿವ ಆರ್.ಅಶೋಕ್ ಸಭೆಯಲ್ಲಿ ಭಾಗಿಯಾಗಿದ್ದಾರೆ.