ಬೆಂಗಳೂರು : ‘ನಮ್ಮ ಮೆಟ್ರೋ’ದಲ್ಲಿ ಕನ್ನಡೇತರರನ್ನು ಕೈ ಬಿಡಿ, ಕನ್ನಡಿಗರನ್ನೇ ನೇಮಿಸಿಕೊಳ್ಳಿ ಎಂದು ಬಿಎಂಆರ್ ಸಿಎಲ್ ಎಂಡಿ ಗೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಬಿಎಂಆರ್ ಸಿಎಲ್’ಗೆ ಪತ್ರ ಬರೆದಿದ್ದಾರೆ.
ನಮ್ಮ ಮೆಟ್ರೋ ಸಂಸ್ಥೆ ಕೂಡಲೇ ಕನ್ನಡೇತರರಿಗೆ ನೇಮಕಾತಿ ಕಲ್ಪಿಸುವ ಪ್ರಕ್ರಿಯೆಯನ್ನು ತಡೆಹಿಡಿಯಬೇಕು. ಹಿಂದಿನ ನೇಮಕಾತಿ ಅಧಿಸೂಚನೆಗಳಲ್ಲಿ ನೇಮಕಗೊಂಡ ಕನ್ನಡೇತರರಿಗೆ ಕನ್ನಡ ಕಲಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು.
ಕನ್ನಡ ಕಲಿಯದ ಕನ್ನಡೇತರರನ್ನು ಕೂಡ ಸೇವೆಯಿಂದ ಬಿಡುಗಡೆ ಮಾಡಬೇಕು ಮತ್ತು ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ಸಂಪೂರ್ಣವಾಗಿ ಕನ್ನಡಿಗರನ್ನೇ ನೇಮಕ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ. ನೇಮಕಗೊಂಡ ಕನ್ನಡೇತರರಿಗೆ ಆದ್ಯತೆ ಮೇರೆಗೆ ಕನ್ನಡವನ್ನು ಕಲಿಸಬೇಕಾದುದು ಸಹ ನಮ್ಮ ಮೆಟ್ರೊ ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ.ಕನ್ನಡ ಕಲಿಯದ ಕನ್ನಡೇತರರನ್ನು ಸೇವೆಯಿಂದ ಬಿಡುಗಡೆ ಮಾಡಬೇಕು ಮತ್ತು ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ಸಂಪೂರ್ಣವಾಗಿ ಕನ್ನಡಿಗರನ್ನೇ ನೇಮಕ ಮಾಡಬೇಕೆಂದು ಈ ಮೂಲಕ ನಿಮಗೆ ತಿಳಿಸುತ್ತೇನೆ ಎಂದಿದ್ದಾರೆ.