ಕೊಯಮತ್ತೂರು: ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಕರ್ನಾಟಕ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕೇಸ್ ದಾಖಲಾಗಿದೆ.
ಕೊಯಮತ್ತೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಣ್ಣಾಮಲೈ ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಧಿಕ ಜನರನ್ನು ಸೇರಿಸಿದ್ದಾರೆ ಎನ್ನುವ ಆರೋಪದ ಮೇಲೆ ಅಣ್ಣಾಮಲೈ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಗುರುವಾರ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ಅಣ್ಣಾಮಲೈ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿತ್ತು. ಅಧಿಕ ಮಂದಿ ಈ ಸಂದರ್ಭದಲ್ಲಿದ್ದರು. ಲಾಕ್ಡೌನ್ ನಿಯಮ ಉಲ್ಲಂಘನೆ, ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.