ಬೆಂಗಳೂರು: ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರ ವಿರುದ್ಧ ಬಿಜೆಪಿಯಿಂದ ದೂರು ನೀಡಲಾಗಿದೆ.
ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಲಾಗಿದ್ದು, ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಎಸಿಪಿ ವೆಂಕಟೇಶ್ ನಾಯ್ಡು ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಲಾಗಿದೆ.
ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಡಿ.ಕೆ. ಸುರೇಶ್ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು ನೀಡಿದೆ ಎಂದು ಹೇಳಲಾಗಿದೆ.