
ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಮತ್ತು ವಿಧಾನ ಪರಿಷತ್ 4 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಗಳ ಹೆಸರನ್ನು ಬಿಜೆಪಿ ಸಿದ್ದಪಡಿಸಿದೆ.
ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳ ಆಯ್ಕೆ ಮಾಡಿ ಕೇಂದ್ರೀಯ ಚುನಾವಣಾ ಸಮಿತಿಗೆ ಹೆಸರುಗಳನ್ನು ರವಾನೆ ಮಾಡಲಾಗಿದೆ. ಆರ್.ಆರ್. ನಗರ ಕ್ಷೇತ್ರಕ್ಕೆ ಮುನಿರತ್ನ ಮತ್ತು ತುಳಸಿ ಮುನಿರಾಜು ಗೌಡ ಅವರ ಹೆಸರನ್ನು ಪರಿಗಣಿಸಲಾಗಿದೆ. ಶಿರಾ ವಿಧಾನಸಭೆ ಕ್ಷೇತ್ರಕ್ಕೆ ಮೂವರು ಆಕಾಂಕ್ಷಿಗಳಾದ ಬಿ.ಕೆ. ಮಂಜುನಾಥ್, ಎಸ್.ಆರ್. ಗೌಡ, ರಾಜೇಶ್ ಗೌಡ ಅವರ ಹೆಸರನ್ನು ರವಾನಿಸಲಾಗಿದೆ ಎಂದು ಹೇಳಲಾಗಿದೆ.
ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಪುಟ್ಟಣ್ಣ, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿದಾನಂದ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಶೀಲ್ ನಮೋಶಿ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಎಸ್ಪಿ ಸುಂಕನೂರ್ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ.