ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ನಾಯಕರಿಂದ ಹಣದ ಆಮಿಷ ಒಡ್ಡಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಗೆ ಕಾಂಗ್ರೆಸ್ ನಿಯೋಗದಿಂದ ದೂರು ನೀಡಲಾಗಿದೆ.
ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಹಣ ಹಂಚುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಂಸದ ಉಗ್ರಪ್ಪ ಆರೋಪಿಸಿದ್ದಾರೆ.
ಬಿಜೆಪಿಯವರು ಹಣ ಹಂಚುವಾಗ ಮತದಾರರಿಂದ ವಿಡಿಯೋ ಮಾಡಿಕೊಂಡಿದ್ದು ಈ ಸಾಕ್ಷ್ಯವನ್ನು ಚುನಾವಣಾ ಆಯೋಗಕ್ಕೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ಬಿಜೆಪಿಯವರು ಕೇವಲ ದುಡ್ಡು ಹಂಚುತ್ತಿರುವುದು ಅಷ್ಟೇ ಅಲ್ಲ. ಬಿಜೆಪಿ ಗೆದ್ದರೆ ಮಾತ್ರ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದ್ದು, ಹೀಗಾಗಿ ಕ್ರಮಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎನ್ನಲಾಗಿದೆ.