alex Certify BIG NEWS: ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ – ಹೆಚ್.ಡಿ. ಕುಮಾರಸ್ವಾಮಿ ಸುಳಿವು – ಬಿಜೆಪಿ ಬಗ್ಗೆ ಮೃದು ಧೋರಣೆ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ – ಹೆಚ್.ಡಿ. ಕುಮಾರಸ್ವಾಮಿ ಸುಳಿವು – ಬಿಜೆಪಿ ಬಗ್ಗೆ ಮೃದು ಧೋರಣೆ..?

ರಾಮನಗರ: ಎರಡು ತಿಂಗಳ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬಿಡದಿ ಸಮೀಪದ ಕೇತಗಾನಹಳ್ಳಿ ತೋಟದ ನಿವಾಸದಲ್ಲಿ ಶನಿವಾರ ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಎ.ಪಿ. ರಂಗನಾಥ್ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಜೊತೆಗೂಡಿ ಸರ್ಕಾರ ರಚನೆ ಮಾಡುವ ಮೂಲಕ ತಪ್ಪು ಮಾಡಿದ್ದೇನೆ. ಮುಳ್ಳಿನ ಮೇಲೆ ಹಾಕಿದ್ದ ಬಟ್ಟೆಯನ್ನು ಬಿಡಿಸಿಕೊಂಡಿದ್ದೇನೆ. ಅಂದು ಬಿಜೆಪಿಯೊಂದಿಗೆ ಸರ್ಕಾರ ರಚಿಸಿದ್ದರೆ ಇಂದಿಗೂ ನಾನೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದಲ್ಲಿಯೂ ನನ್ನ ಮಾತಿಗೆ ಮನ್ನಣೆ ದೊರೆಯುತ್ತಿದೆ. ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಮುಂದಿನ ದಿನಗಳಲ್ಲಿ ಸ್ವತಂತ್ರವಾಗಿ ಮುಖ್ಯಮಂತ್ರಿಯಾಗುವ ಅವಕಾಶವನ್ನು ರಾಜ್ಯದ ಜನ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...