ಬೆಳಗಾವಿ: ಖಾಸಗಿ ಆಸ್ಪತ್ರೆ ವೈದ್ಯನ ಬಳಿ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗೋಕಾಕ್ ನಗರದ ಬಿಜೆಪಿ ಪ್ರಮುಖ ಮುಖಂಡನೊಬ್ಬ ಸೇರಿದಂತೆ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಸೇರಿ ಇಬ್ಬರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಚಿಕಿತ್ಸೆಗೆ ಬಂದಿದ್ದ ವ್ಯಕ್ತಿ ವೈದ್ಯರ ನಿರ್ಲಕ್ಷದಿಂದ ಸಾವು ಕಂಡ ಹಿನ್ನೆಲೆಯಲ್ಲಿ ಮೃತರ ಸಂಬಂಧಿಕರು ದೂರು ನೀಡಿದ್ದು, ಅದನ್ನು ರಾಜಿ ಮಾಡಿಸಲು ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ಬಳಿ ಬಿಜೆಪಿ ಮುಖಂಡ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.