ಬಿಜೆಪಿ ಆಡಳಿತ ನಡೆಸುತ್ತಿರುವ ಹಲವು ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕರ್ನಾಟಕದ ಬಿಜೆಪಿ ಶಾಸಕರೊಬ್ಬರ ತಾಯಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ತಾಯಿ ಪುಟ್ಟಮ್ಮ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಸ್ವತಃ ಶಾಸಕರೇ ಈ ವಿಷಯವನ್ನು ಖಚಿತಪಡಿಸಿದ್ದಾರೆ. ತಮ್ಮ ಮೂವರು ಗಂಡು ಮಕ್ಕಳ ಪೈಕಿ ಮೊದಲ ಮಗ ತಿಪ್ಪೇಸ್ವಾಮಿ ಏಳು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾರಣ ಖಿನ್ನತೆಗೊಳಗಾಗಿ ಪುಟ್ಟಮ್ಮ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎನ್ನಲಾಗಿದೆ.
ಸಿಡಿ ಕೇಸ್ ನಲ್ಲಿ ತಾಂತ್ರಿಕ ಸಮಸ್ಯೆ: ಪೊಲೀಸ್ ಆಯುಕ್ತರ ಹೇಳಿಕೆ
ಕ್ರಿಶ್ಚಿಯನ್ ಧರ್ಮದ ಸಂಪ್ರದಾಯಗಳನ್ನು ಪುಟ್ಟಮ್ಮ ಪಾಲಿಸುತ್ತಿದ್ದು, ಈ ಹಿಂದೆ ಗೂಳಿಹಟ್ಟಿ ಶೇಖರ್ ತಮ್ಮ ತಾಯಿಗಾಗಿ ಹೊಸ ಮನೆ ನಿರ್ಮಿಸಿದ್ದ ಸಂದರ್ಭದಲ್ಲಿ ಗೃಹ ಪ್ರವೇಶದ ವೇಳೆ ಹಿಂದೂ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ ಎಂಬ ಕಾರಣಕ್ಕೆ ಗೃಹ ಪ್ರವೇಶಕ್ಕೂ ಬಂದಿರಲಿಲ್ಲವೆನ್ನಲಾಗಿದೆ.