ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ನಂತರದಲ್ಲಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಾರೋಗ್ಯ ಉಂಟಾಗಿದ್ದ ಹಿನ್ನೆಲೆಯಲ್ಲಿ ಸಾಗರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ಅವರು ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದವಾರ ಕೊರೊನಾದಿಂದ ಚೇತರಿಸಿಕೊಂಡಿದ್ದ ಅವರು ಹಲವು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು. ಆದರೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.