ಬೆಂಗಳೂರು: ರಾಜ್ಯದ ಗಮನ ಸೆಳೆದ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಇದರ ಬೆನ್ನಲ್ಲೇ ತುಳಸಿ ಮುನಿರಾಜು ಗೌಡ ಬೆಂಬಲಿಗ ರಾಜೀನಾಮೆ ನೀಡಿದ್ದಾರೆ. ತುಳಸಿ ಮುನಿರಾಜು ಗೌಡ ಅವರು ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇಬ್ಬರ ಪೈಪೋಟಿಯಲ್ಲಿ ಮುನಿರತ್ನ ಅವರಿಗೆ ಟಿಕೆಟ್ ನೀಡಲಾಗಿದೆ.
ಇದನ್ನು ವಿರೋಧಿಸಿ ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂದೇಶ ಬಂಡಪ್ಪ ರಾಜೀನಾಮೆ ನೀಡಿದ್ದಾರೆ. ಪಕ್ಷವನ್ನು ಸಂಘಟಿಸಿದ ತುಳಸಿ ಮುನಿರಾಜು ಗೌಡ ಅವರಿಗೆ ಟಿಕೆಟ್ ನೀಡದ ಕಾರಣ ನನ್ನಂತಹ ಅನೇಕ ಕಾರ್ಯಕರ್ತರಿಗೆ ನೋವಾಗಿದೆ ಎಂದು ಅವರು ಹೇಳಿದ್ದು ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.