ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಸಮಿತಿಗೆ ಮೂವರ ಹೆಸರನ್ನು ಶಿಫಾರಸು ಮಾಡಲಾಗಿದೆ.
ಪ್ರಭಾಕರ ಕೋರೆ, ರಮೇಶ್ ಕತ್ತಿ ಮತ್ತು ಪ್ರಕಾಶ್ ಶೆಟ್ಟಿ ಅವರ ಹೆಸರನ್ನು ರವಾನಿಸಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇಂದು ಕೋರ್ ಕಮಿಟಿ ಸಭೆ ನಡೆಸಲಾಗಿದ್ದು ಸಭೆಯಲ್ಲಿ ಚರ್ಚಿಸಿ ಈ ಮೂವರ ಹೆಸರನ್ನು ಕೇಂದ್ರ ಸಮಿತಿಗೆ ಕಳುಹಿಸಲು ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿಗಳಾಗಿ ಪ್ರಭಾಕರ ಕೋರೆ, ರಮೇಶ್ ಕತ್ತಿ, ಪ್ರಕಾಶ್ ಶೆಟ್ಟಿ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿ ಕೇಂದ್ರ ಸಮಿತಿಗೆ ಶಿಫಾರಸು ಮಾಡಲಾಗಿದೆ ಎಂದು ಹೇಳಲಾಗಿದೆ.
ರಾಜ್ಯಸಭೆಗೆ ಬಿಜೆಪಿಯಿಂದ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವ ಕುರಿತು ತೀವ್ರ ಕುತೂಹಲ ಮೂಡಿಸಿತ್ತು. ಮಾಜಿ ಸಂಸದ ರಮೇಶ ಕತ್ತಿ, ಹಾಲಿ ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ, ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ, ತೇಜಸ್ವಿನಿ ಅನಂತಕುಮಾರ್, ಕೆ.ವಿ. ಕಾಮತ್, ವಿಜಯ ಸಂಕೇಶ್ವರ್ ಸೇರಿದಂತೆ ಹಲವರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಇಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಮಿತಿಗೆ ಮೂವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ.