ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದಲೇ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗಿದೆ.
ಎಲ್ಲೆಡೆ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಹಣ್ಣು, ತರಕಾರಿ, ದಿನಸಿ, ಮಾಂಸ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ಮಧ್ಯಾಹ್ನ 12 ಗಂಟೆಯ ನಂತರ ಔಷಧ ಮಾರಾಟ ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡಬೇಕಿದೆ. ಹೋಟೆಲ್ ಗಳಿಗೆ ರಾತ್ರಿ 8 ಗಂಟೆಯವರೆಗೆ ಪಾರ್ಸೆಲ್ ಗೆ ಅವಕಾಶ ನೀಡಲಾಗಿದೆ. ಅನಗತ್ಯವಾಗಿ ಮನೆಯಿಂದ ಹೊರ ಬರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಲಾಗಿದೆ.
ಇನ್ನು ಬೆಂಗಳೂರಿಗೆ ಸಂಪರ್ಕಿಸುವ ಎಲ್ಲ ಗಡಿಗಳನ್ನು ಬಂದ್ ಮಾಡಲಾಗಿದ್ದು, ಅನಗತ್ಯ ವಾಹನ, ಜನ ಸಂಚಾರ ನಿರ್ಬಂಧಿಸಲಾಗಿದೆ. ನಿಗದಿಯಾದ ವಿಮಾನ ರೈಲು ಪ್ರಯಾಣಿಕರಿಗೆ ವಿನಾಯಿತಿ ನೀಡಲಾಗಿದೆ. ಬಿಎಂಟಿಸಿ ಸೇರಿ ಬಸ್, ಆಟೋ, ಟ್ಯಾಕ್ಸಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಅಗತ್ಯ ಸೇವೆ ಸಿಬ್ಬಂದಿಗಾಗಿ 134 ಬಿಎಂಟಿಸಿ ಬಸ್ ಸಂಚರಿಸಲಿವೆ.