alex Certify ಹಿರಿಯ ನಾಗರಿಕರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ನಾಗರಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಲಾಕ್ಡೌನ್ ಮುಂದುವರೆದಿದ್ದರೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸರ್ಕಾರದ ನಿರ್ದೇಶನದನ್ವಯ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಸಾರಿಗೆ ಸೇವೆಯನ್ನು ಹಂತಹಂತವಾಗಿ ಆರಂಭಿಸಿದೆ.

ಸರ್ಕಾರದ ಆದೇಶದ ಅನ್ವಯ 65 ವರ್ಷ ಮೇಲ್ಪಟ್ಟ ನಾಗರಿಕರಿಗೆ ಅತ್ಯಗತ್ಯ ಸೇವೆಗಳಿಗೆ ಓಡಾಡಲು ಅವಕಾಶ ನೀಡಲಾಗಿದೆ. ಅಂತೆಯೇ ಬಿಎಂಟಿಸಿ ಬಸ್ ಗಳಲ್ಲಿ ಹಿರಿಯ ನಾಗರಿಕರಿಗೆ ಪ್ರಯಾಣಕ್ಕೆ ಅನುಮತಿ ನೀಡಲಾಗಿದ್ದು ಪ್ರಯಾಣದರದಲ್ಲಿ ಹಾಗೂ ಸಾಮಾನ್ಯ ಮಾಸಿಕ ಪಾಸ್ ನಲ್ಲಿ ರಿಯಾಯಿತಿ ಮುಂದುವರೆಸಲಾಗಿದೆ.

ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಈ ಕುರಿತು ಮಾಹಿತಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ಘಟಕ ವ್ಯವಸ್ಥಾಪಕರಿಗೆ ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸೂಚನೆ ನೀಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...