alex Certify BIG NEWS: ನಾಳೆಯಿಂದಲೇ BMTC ಸಂಚಾರಕ್ಕೆ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆಯಿಂದಲೇ BMTC ಸಂಚಾರಕ್ಕೆ ಸಿದ್ಧತೆ

ಬೆಂಗಳೂರು: ಲಾಕ್ ಡೌನ್ ನಡುವೆ ಕೆಲಸ ಮಾಡುತ್ತಿರುವ ಕಂಪನಿಗಳಿಗೆ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಕಾರ್ಖಾನೆ, ಸರ್ಕಾರಿ ಸಂಸ್ಥೆಗಳಿಗೆ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ನಾಳೆಯಿಂದಲೇ ಬಸ್ ಸಂಚಾರ ಆರಂಭಕ್ಕೆ ಬಿಎಂಟಿಸಿ ಸಿದ್ಧತೆ ನಡೆಸಿದೆ.

ಬಾಡಿಗೆ ಆಧಾರದಲ್ಲಿ ಬಸ್ ಗಳನ್ನು ನೀಡಲು ಸಿದ್ಧತೆ ಕೈಗೊಳ್ಳಲಾಗಿದೆ. ಕೇಂದ್ರದ ಆದೇಶದ ಹಿನ್ನೆಲೆಯಲ್ಲಿ ಬಸ್ ನೀಡಲು ಸಿದ್ಧತೆ ನಡೆಸಲಾಗಿದೆ.

ಬಸ್ ಪಡೆಯುವವರಿಗೆ ಬಿಎಂಟಿಸಿ ಷರತ್ತುಗಳನ್ನು ವಿಧಿಸಿದೆ. ಬಸ್ ಗಳಲ್ಲಿ ಶೇಕಡ 40ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದುಕೊಂಡು ಹೋಗಬೇಕು. ಎಲ್ಲಾ ಪ್ರಯಾಣಿಕರು ಮಾಸ್ಕ್ ಧರಿಸಬೇಕು. ಇಳಿಯುವಾಗ ಮತ್ತು ಹತ್ತುವಾಗ ಅಂತರ ಕಾಪಾಡಿಕೊಳ್ಳಬೇಕು. ಬಸ್ ನಲ್ಲಿ ಎಲ್ಲಾ ಪ್ರಯಾಣಿಕರು ಸ್ಯಾನಿಟೈಸರ್ ಬಳಸಬೇಕು ಎಂದು ತಿಳಿಸಲಾಗಿದ್ದು, ಈಗಾಗಲೇ 20 ಬಸ್ ಗಳಿಗೆ ಕಂಪನಿಗಳಿಂದ ಬೇಡಿಕೆ ಬಂದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...