ಕರ್ನಾಟಕ ಅಂತರ್ಜಲ ಪ್ರಾಧಿಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ. ಅಂತರ್ಜಲ ಮಟ್ಟ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಬೋರ್ ವೆಲ್ ಕೊರೆಸಲು ನಿಬಂಧನೆ ಹಾಕಲಾಗಿದೆ.
ಇನ್ಮು ಮುಂದೆ ಬಾವಿ ಅಥವಾ ಕೊಳವೆ ಬಾವಿ ಕೊರೆಸಬೇಕಾದಲ್ಲಿ ಎಂದರೆ ಕಡ್ಡಾಯವಾಗಿ ಜಿಲ್ಲಾ ಮಟ್ಟದ ಸಮಿತಿಯಿಂದ ಅನುಮತಿ ಪಡೆಯಬೇಕು. ಅನುಮತಿ ಪಡೆಯದೇ ಬಾವಿ ಕೊರೆಸಿದರೆ ಅಂತವರನ್ನು ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ಆದೇಶ ಹೊರಡಿಸಲಾಗಿದೆ.
ರಾಜ್ಯದ 15 ಜಿಲ್ಲೆಗಳನ್ನು ಅಂತರ್ಜಲ ಅತಿ ಬಳಕೆಯ ಜಿಲ್ಲೆಗಳೆಂದು ಗುರುತಿಸಿದೆ. ಅವುಗಳೆಂದರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಕೋಲಾರ, ರಾಮನಗರ, ತುಮಕೂರು ಈ 15 ಜಿಲ್ಲೆಗಳಲ್ಲಿನ ಒಟ್ಟು 45 ತಾಲೂಕುಗಳಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಹೇಳಲಾಗಿದೆ.