alex Certify BPL ಕಾರ್ಡ್ ಪಡೆಯಲು ಯಾರು ಅನರ್ಹರು…? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BPL ಕಾರ್ಡ್ ಪಡೆಯಲು ಯಾರು ಅನರ್ಹರು…? ಇಲ್ಲಿದೆ ಮಾಹಿತಿ

ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ನೀಡುತ್ತಿದೆ. ಇಂಥವರಿಗೆ ರಿಯಾಯಿತಿ ದರದಲ್ಲಿ ಪಡಿತರ ಲಭ್ಯವಾಗುತ್ತದೆ. ಆದರೆ ಉಳ್ಳವರು ಕೂಡಾ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದು, ಇದೀಗ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಬಿಪಿಎಲ್ ಪಡಿತರ ಕಾರ್ಡ್ ಪಡೆದ ಅನರ್ಹರು ಅವುಗಳನ್ನು ಕೂಡಲೇ ಹಿಂದಿರುಗಿಸಬೇಕು ಎಂದು ಹಲವು ಗಡುವುಗಳನ್ನು ನೀಡಿದ್ದು, ಆದರೆ ಕೆಲವರು ಈಗಲೂ ಕೂಡ ಹಿಂದಿರುಗಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಅಂತಿಮ ಗಡುವನ್ನು ನೀಡಲಾಗಿದ್ದು, ಬಿಪಿಎಲ್ ಪಡಿತರ ಕಾರ್ಡ್ ಪಡೆಯಲು ಯಾರು ಅನರ್ಹರು ಎಂಬುದರ ಪಟ್ಟಿ ಮತ್ತೊಮ್ಮೆ ಬಿಡುಗಡೆಗೊಳಿಸಲಾಗಿದೆ.

‘ಆರ್ಥಿಕ’ ಸಂಕಷ್ಟದಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್

ಕಾಯಂ ನೌಕರರು, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ಯ ಸಂಸ್ಥೆಗಳು, ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು ಬಿಪಿಎಲ್ ಪಡಿತರ ಕಾರ್ಡ್ ಪಡೆಯುವಂತಿಲ್ಲ.

ಅಲ್ಲದೆ ಗ್ರಾಮೀಣ ಪ್ರದೇಶದಲ್ಲಿ 3 ಎಕರೆ ಒಣ ಭೂಮಿ, ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶಗಳಲ್ಲಿ ಸಾವಿರ ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಸ್ವಂತ ಮನೆ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಮುಂತಾದ ವಾಣಿಜ್ಯ ವಾಹನವನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬಗಳು, ವಾರ್ಷಿಕ ಆದಾಯ 1.20 ಲಕ್ಷ ಗಳಿಗಿಂತಲೂ ಜಾಸ್ತಿ ಇರುವ ಕುಟುಂಬಗಳ ಸದಸ್ಯರು ಬಿಪಿಎಲ್ ಪಡಿತರ ಕಾರ್ಡ್ ಪಡೆಯಲು ಅರ್ಹರಲ್ಲ ಎಂದು ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...