ಬೆಂಗಳೂರು: ಶೈವ-ಮಾಧ್ವ ಜಟಾಪಟಿ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ವಿವಾದದ ನಡುವೆಯೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ ಧಾರ್ಮಿಕ ದತ್ತಿ ಇಲಾಖೆ ಆದೇಶ ನೀಡಿತ್ತು. ಇದರ ನಡುವೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ ರುದ್ರ ಪಾರಾಯಣ, ರುದ್ರ ಹೋಮ, ಬಿಲ್ವಾರ್ಚನೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಅಗ್ಗದ ಬೆಲೆಗೆ LPG ಸಿಲಿಂಡರ್ ಖರೀದಿಗೆ ಇಲ್ಲಿದೆ ಅವಕಾಶ
ಈ ನಡುವೆ ಬೆಂಗಳೂರಿನ ಮುರಳಿಧರ್, ವಿಜಯ್ ಸಿಂಹಾಚಾರ್ ಎಂಬುವವರು ಧಾರ್ಮಿಕ ದತ್ತಿ ಇಲಾಖೆ ಆದೇಶ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ ತಡೆಯಾಜ್ಞೆ ನೀಡಿದೆ.