ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಅಟ್ಟಹಾಸದ ವಾಸ್ತವ ಚಿತ್ರಣವಿದು…..ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಬೇಕಾದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯೋಣವೆಂದರೆ ಆಸ್ಪತ್ರೆಯಲ್ಲಿ ಅವರಿಗೆ ಬೆಡ್ ಸಿಕ್ಕಿಲ್ಲವೆನ್ನಲಾಗಿದೆ.
ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕುಮಾರಸ್ವಾಮಿ, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಲು ಮುಂದಾಗಿದ್ದರು. ಆದರೆ ಅವರಿಗೆ ಬೆಡ್ ಸಿಕ್ಕಿಲ್ಲ ಎನ್ನಲಾಗಿದೆ.
ಕೊರೊನಾ ಲಸಿಕೆ ಪಡೆಯಲು ದುಬಾರಿ ಉಡುಗೆ ಧರಿಸಿ ಬಂದ ಮಹಿಳೆ…! ಇದರ ಹಿಂದಿದೆ ಈ ಕಾರಣ
ಉಪಚುನಾವಣಾ ಪ್ರಚಾರ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದ ಹೆಚ್.ಡಿ. ಕುಮಾರಸ್ವಾಮಿ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದರು. ಈ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ಅಲ್ಲದೇ ಜ್ವರ ಹಾಗೂ ಸುಸ್ತು ಕಂಡುಬಂದಿದೆ.
ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಲು ಮುಂದಾಗಿ ಮಣಿಪಾಲ್ ಆಸ್ಪತ್ರೆಗೆ ಸಂಪರ್ಕಿಸಿದ್ದು, ಆದರೆ ಬೆಡ್ ಲಭ್ಯವಿರಲಿಲ್ಲವೆನ್ನಲಾಗಿದೆ. ಹೀಗಾಗಿ ಕುಮಾರಸ್ವಾಮಿ ಅವರು ಬೆಡ್ ಲಭ್ಯವಾದ ಬಳಿಕವಷ್ಟೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಲಿದ್ದಾರೆ.