ಬೆಳಗಾವಿ: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಮುಷ್ಕರ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುತ್ತಿದ್ದ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೋಟೀಸ್ ಗೂ ಹೆದರದ ಸಿಬ್ಬಂದಿ; ಮುಷ್ಕರ ನಿರತ ಸಾರಿಗೆ ನೌಕರರ ದಿಢೀರ್ ವರ್ಗಾವಣೆ; ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ
ಸಾರಿಗೆ ಮುಷ್ಕರವನ್ನು ರಾಜ್ಯಾದ್ಯಂತ ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಇಂದು ಬೆಳಗಾವಿಗೆ ತೆರಳಿ, ಖಾಸಗಿ ಹೋಟೆಲ್ ನಲ್ಲಿ ಸಾರಿಗೆ ನೌಕರರು ಹಾಗೂ ಸಿಬ್ಬಂದಿಗಳ ಜೊತೆ ಸಭೆ ನಡೆಸುತ್ತಿದ್ದರು. ಈ ವೇಳೆ ಸಭೆ ನಡೆಸುವ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೋಡಿಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.