ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನಿಡಿದ ಆರೋಪಕ್ಕೆ ಸಂಬಂಧಿಸಿದಂತೆ ವಕೀಲೆಯೊಬ್ಬರು ಕೋರ್ಟ್ ಆವರಣದಲ್ಲೇ ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಘಟನೆ ನಡೆದಿದೆ.
ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿ ಭಗವಾನ್ ವಿರುದ್ಧ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್ ಇಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರಾಗಿದ್ದು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ವಿಚಾರಣೆ ಬಳಿಕ ಕೋರ್ಟ್ ನಿಂದ ಭಗವಾನ್ ಹೊರ ಬರುತ್ತಿದ್ದಂತೆಯೇ ಏಕಾಏಕಿ ವಕೀಲೆ ಮೀರಾ, ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಕೀಲೆ ಮೀರಾ ವಿರುದ್ಧ ಭಗವಾನ್ ದೂರು ದಾಖಲಿಸಿದ್ದಾರೆ.