ಬೆಂಗಳೂರು: ಚಾಮರಾಜನಗರ ಆಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣಕ್ಕೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ಹೈಕೋರ್ಟ್ ಗೆ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ವರದಿ ನೀಡಿದೆ.
ಮೇ 2ರಂದು ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದರು. ಆದರೆ ಆಸ್ಪತ್ರೆಯ ವೈದ್ಯರು ಕೇವಲ ಮೂವರು ಸೋಂಕಿತರು ಮಾತ್ರ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಿದ್ದರು.
ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲಗೌಡ ನೇತೃತ್ವದ ಸಮಿತಿ ರಚಿಸಲಾಗಿತ್ತು. ಇದೀಗ ಸಮಿತಿ ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದು, ಆಕ್ಸಿಜನ್ ಕೊರತೆಯಿಂದಲೇ 24 ರೋಗಿಗಳು ಮೃತಪಟ್ಟಿದ್ದು, ಇದಕ್ಕೆ ಚಾಮರಾಜನಗರ ಡಿ ಸಿ, ಎಂ.ಆರ್. ರವಿ ಅವರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ. ಈ ಮೂಲಕ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್ ನೀಡಲಾಗಿದೆ.