alex Certify ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಪೊಲೀಸರ ವಶಕ್ಕೆ; ರಾಜಭವನ ಚಲೋ ಪ್ರತಿಭಟನಾ ರ್ಯಾಲಿಗೆ ತಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಪೊಲೀಸರ ವಶಕ್ಕೆ; ರಾಜಭವನ ಚಲೋ ಪ್ರತಿಭಟನಾ ರ್ಯಾಲಿಗೆ ತಡೆ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ರೈತರು ನಡೆಸುತ್ತಿದ್ದ ರಾಜಭವನ ಚಲೋ ಪ್ರತಿಭಟನಾ ರ್ಯಾಲಿಗೆ ತಡೆಯೊಡ್ದಲಾಗಿದೆ.

ಫ್ರೀಡಂ ಪಾರ್ಕ್ ನಿಂದ ರಾಜಭವನಕ್ಕೆ ಕಾಂಗ್ರೆಸ್ ರಾಜಭವನ ಚಲೋ ರ್ಯಾಲಿಯನ್ನು ಮಹಾರಾಣಿ ಕಾಲೇಜು ಬಳಿ ಪೊಲೀಸರು ತಡೆದಿದ್ದಾರೆ. ಈ ವೇಳೆ ಪ್ರತಿಭಟನಾನಿರತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೆ ಎಸ್ ಆರ್ ರೈಲ್ವೆ ನಿಲ್ದಾಣದಿಂದ ಟ್ರ್ಯಾಕ್ಟರ್ ಮೂಲಕ ಫ್ರೀಡಂ ಪಾರ್ಕ್ ವರೆಗೆ ರೈತರ ಜೊತೆಗೂಡಿ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ್ದ ಕಾಂಗ್ರೆಸ್ ನಾಯಕರು ಫ್ರೀಡಂ ಪಾರ್ಕ್ ನಲ್ಲಿ ಸಮಾವೇಶ ನಡೆಸಿದರು. ಬಳಿಕ ಅಲ್ಲಿಂದ ರಾಜಭವನ ಚಲೋ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ರಾಜಭವನಕ್ಕೆ ತಲುಪುವ ಮುನ್ನವೇ ಕಾಂಗ್ರೆಸ್ ನಾಯಕರನ್ನು ತಡೆದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...