ಬೆಂಗಳೂರು: ಡ್ರಗ್ಸ್ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಇದೀಗ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಡ್ರಗ್ಸ್ ಡೀಲಿಂಗ್ ಮಾಡುತ್ತಿದ್ದ ಮೇಳೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಕುಮಾರ್ ಲಮಾಣಿಯನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್, ಡಾರ್ಕ್ ವೆಬ್ ಸೈಟ್ ಮೂಲಕ ಡ್ರಗ್ಸ್ ಖರೀದಿ ಮಾಡುತ್ತಿದ್ದ ಎನ್ನಲಾಗಿದೆ.
ಅಲ್ಲದೇ ಡ್ರಗ್ಸ್ ಪೆಡ್ಲರ್ ಗಳಿಗೆ ನೆರವು ನೀಡಿ, ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡುತ್ತಿದ್ದ ಎಂಬ ಆರೋಪ ಕೂಡ ದರ್ಶನ್ ಲಮಾಣಿ ವಿರುದ್ಧ ಕೇಳಿಬಂದಿದೆ.