ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆಯುತ್ತಿದೆ. ಅಲ್ಲದೇ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಕೂಡ ಲಾಕ್ ಡೌನ್ ಜಾರಿ ಮಾಡುವಂತೆ ಸಲಹೆ ನೀಡಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದರು. ಇದೀಗ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೀದರ್ ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ. ಜನರು ಮೈಮರೆತರೆ ಅನಾಹುತಗಳು ಕಟ್ಟಿಟ್ಟ ಬುತ್ತಿ. ಹಾಗಾಗಿ ಜನರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡು, ಜಾಗೃತೆ ವಹಿಸಬೇಕು. ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾವುದೇ ರೀತಿ ಗೊಂದಲ ಬೇಡ ಎಂದರು.
ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ
ಸಲಹಾ ಸಮಿತಿ ಲಾಕ್ ಡೌನ್ ಬಗ್ಗೆ ಹೇಳಿದೆ ಎಂಬ ವಿಚಾರವಾಗಿ ಮಾತನಾಡಿದ ಸಿಎಂ, ನಾನೂ ಕೂಡ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಲ್ಲಿದ್ದೇನೆ. ಸಮಿತಿ ಸದ್ಯಕ್ಕೆ ಲಾಕ್ ಡೌನ್ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ. ಏನೇನೋ ತಪ್ಪು ಹೇಳಿಕೆಗಳನ್ನು ನೀಡುವುದು ಬೇಡ. ಆದರೆ ಮೇ 2ನೇ ವಾರದಲ್ಲಿ ಕೊರೊನಾ ಇನ್ನಷ್ಟು ಹೆಚ್ಚಳವಾಗಲಿದೆ ಎಂದು ಹೇಳಿದೆ. ಹಾಗಾಗಿ ಸರ್ವಪಕ್ಷ ಸಭೆ ಕರೆದು ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಕಠಿಣ ಕ್ರಮಗಳ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದರು.