ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿ ಹೊರಬಿದ್ದಿದ್ದು, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಿದ್ದು, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. 7 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತಿದ್ದು, ನೂತನ ಸಚಿವರ ಪಟ್ಟಿ ಸಂಜೆ ಬಿಡುಗಡೆಗೊಳ್ಳಲಿದೆ ಎಂದು ಹೇಳಿದ್ದಾರೆ.
ಇನ್ನು ನೂತನ ಸಚಿವರ ಬಗ್ಗೆಯಾಗಲಿ ಅಥವಾ ಸಂಪುಟ ವಿಸ್ತರಣೆ ಕುರಿತಾಗಲಿ ಅನಗತ್ಯ ಗೊಂದಲಗಳು ಬೇಡ. ಸಂಜೆ ವೇಳೆಗೆ ನಾನೇ ಸಂಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಿದರು.