ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ ತಾರಕಕ್ಕೇರಿದ್ದು, ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿಪ್ರದರ್ಶನಕ್ಕೆ ಸಜ್ಜಾಗಿದ್ದಾರೆ.
ಈ ನಡುವೆ ಮಾತನಾಡಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಸಮಾವೇಶ ಮುಗಿಯುವುದರೊಳಗೆ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಲು ಸಿಎಂ ಬಿ.ಎಸ್.ಯಡಿಯೂರಪ್ಪ ಒಪ್ಪಿಗೆ ನೀಡಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಹೆಳಿದ್ದಾರೆ.
ಅಂಬೇಡ್ಕರ್ ಸಂವಿಧಾನದ ಕೆಲ ಕಾನೂನು ಪ್ರಸ್ತುತವಲ್ಲ, ತಿದ್ದುಪಡಿ ಅನಿವಾರ್ಯ: ದೊಡ್ಡರಂಗೇಗೌಡ
ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಮಧ್ಯಾಹ್ನ 2 ಗಂಟೆಯವರೆಗೆ ಗಡುವು ನೀಡಲಾಗುವುದು ಅಷ್ಟರಲ್ಲಿ ಸರ್ಕಾರ ಮೀಸಲಾತಿಗೆ ಒಪ್ಪಿ ಆದೇಶ ಪತ್ರ ಹೊರಡಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ. ಅಲ್ಲದೇ ಒಂದೊಮ್ಮೆ ಇದಕ್ಕೂ ಸರ್ಕಾರ ಬಗ್ಗದಿದ್ದರೆ ಮತ್ತೆ ಪ್ರತಿಭಟನೆ ಮುಂದುವರೆಸುತ್ತೇವೆ. ಒಟ್ಟಾರೆ ನಮಗೆ ನ್ಯಾಯ ಸಿಗುವವರೆಗೂ ಬೆಂಗಳೂರು ಬಿಟ್ಟು ಹೋಗುವ ಮಾತೇ ಇಲ್ಲ ಎಂದು ಹೇಳಿದ್ದಾರೆ.